ಉಡುಪಿಯಲ್ಲಿ 3 ದಿನಗಳ ಕೈಮಗ್ಗ ಸೀರೆ ಉತ್ಸವಕ್ಕೆ ಚಾಲನೆ

ಬ್ರಹ್ಮಾವರ : ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಮೂರು ದಿನಗಳ ಕೈಮಗ್ಗ ಸೀರೆಗಳ ಉತ್ಸವಕ್ಕೆ ಶನಿವಾರ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು.



ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಹಾಗೂ ಉಡುಪಿ, ತಾಳಿಪಾಡಿ, ಶಿವಳ್ಳಿ, ಬ್ರಹ್ಮಾವರ, ಪಡುಪಣಂಬೂರು, ಮಂಗಳೂರು, ಬಸ್ರೂರು ಮತ್ತು ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಈ ಉತ್ಸವ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಕುಲ ಕಸಬುಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು.



ಆಯೋಜನ ಸಮಿತಿ ಗೌರವಾಧ್ಯಕ್ಷ ಡಾ.ಜಗದೀಶ್ ಶೆಟ್ಟಿಗಾರ್ ಆತ್ರಾಡಿ, ನಗರಸಭೆ ಸದಸ್ಯೆ ರಜನಿ ಹೆಬ್ಬಾರ್, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾದ ನೇಕಾರ ವೇದಿಕೆ ಸಂಚಾಲಕ ಡಾ.ಶಿವ ಪ್ರಸಾದ್ ಕಾರ್ಕಳ, ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಶಿವಶಂಕರ್, ಆಯೋಜನ ಸಮಿತಿ ಅಧ್ಯಕ್ಷ ಮಂಜುನಾಥ ಮಣಿಪಾಲ್, ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಕಾರ್ಯಾಧ್ಯಕ್ಷ ರಘು ಶ್ರೀನಿವಾಸ ಶೆಟ್ಟಿಗಾರ್, ಪ್ರಮುಖರಾದ ಜಯರಾಮ್ ಶೆಟ್ಟಿಗಾರ್, ಸತೀಶ್ ಶೆಟ್ಟಿಗಾರ್ ಆತ್ರಾಡಿ ನಾನಾ ದೇವಸ್ಥಾನಗಳ ಮೊಕ್ತೇಸರರು, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಸುಕನ್ಯಾ ಮೇರಿ ಉಪಸ್ಥಿತರಿದ್ದರು.

ಉಡುಪಿ ಕೈಮಗ್ಗದ ಸೀರೆಗಳ ಪ್ರದರ್ಶನ, ಸೌಂದರ್ಯ ಸ್ಪರ್ಧೆ , ನಾನಾ ಗೋಷ್ಠಿ, ವಿಚಾರ ಸಂಕಿರಣ ನಡೆಯಲಿದೆ.

You cannot copy content from Baravanige News

Scroll to Top