ಉಡುಪಿ: ಡಿವೈಡರ್ ಏರಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ.
ಕಾಪು ತಾಲೂಕಿನ ಎರ್ಮಾಳ್ ನಿವಾಸಿ ಧೀರಜ್ ಮತ್ತು ಪವಿತ್ರ ದಂಪತಿ ಗಾಯಗೊಂಡವರು.
ಮಣಿಪಾಲದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಅವರು ಕೆಲಸಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.