ಉಚಿತ ಬಸ್ ಪ್ರಯಾಣ ‘ಶಕ್ತಿ ಯೋಜನೆ’ ಸ್ಥಗಿತವಿಲ್ಲ – ಸ್ಪಷ್ಟನೆ ನೀಡಿದ KSRTC

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಊಹಾಪೋಹಗಳು ಕೇಳಿಬಂದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ) ಮಾಧ್ಯಮ ಪ್ರಕಟನೆ ಹೊರಡಿಸಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ ಎಂದು KSRTC ಸ್ಪಷ್ಟನೆ ನೀಡಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಮುಂದುವರಿಯುತ್ತೆ. ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು. ಮಹಿಳೆಯರ ಉಚಿತ‌ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

ಸಾಮಾಜಿಕ‌ ಜಾಲತಾಣಗಳಲ್ಲಿ ”ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ” ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

”ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

You cannot copy content from Baravanige News

Scroll to Top