ಕಾರ್ಕಳ, ಆ.17: ಶಾಲೆಯ ಸನಿಹದಲ್ಲಿ ಮದ್ಯದಂಗಡಿ ಆರಂಭವಾಗುತ್ತದೆ ಅನ್ನುವ ಮಾಹಿತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಬಜಗೋಳಿ ಎಂಬಲ್ಲಿ ನಡೆದಿದೆ.
ಬಜೆಗೋಳಿಯ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯ ಮುಂಭಾಗದ ಕಟ್ಟಡದಲ್ಲಿ ಮದ್ಯದಂಗಡಿ ಆರಂಭವಾಗುತ್ತಿರುವ ಮಾಹಿತಿ ಹಬ್ಬಿದೆ. ಇದರಿಂದ ಕುಪಿತಗೊಂಡ ವಿದ್ಯಾರ್ಥಿಗಳು ತರಗತಿಗೆ ತೆರಳದೇ ಶಾಲೆಯ ಆವರಣದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಆರಂಭಕ್ಕೆ ಅನುಮತಿ ನೀಡದಂತೆ ವಿದ್ಯಾರ್ಥಿಗಳು ಆಗ್ರಹಿಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಪೋಷಕರು ಸಾಥ್ ನೀಡಿ ಮದ್ಯದಂಗಡಿಯ ಅನುಮತಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.