ಮತಗಟ್ಟೆ ಅಧಿಕಾರಿಗಳಿಂದ ಮನೆ ಮನೆ ಸಮೀಕ್ಷೆ- ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ- 2024ಕ್ಕೆ ಸಂಬಂಧಿಸಿದಂತೆ, ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಆಗಸ್ಟ್ 21ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆ ಸಮೀಕ್ಷೆ ಕಾರ್ಯವನ್ನು ನಡೆಸಲಿದ್ದು, ಈ ಸಂದರ್ಭದಲ್ಲಿ 18 ವರ್ಷ ತುಂಬಿದ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೇ ಇರುವವರ ಮಾಹಿತಿ, 17 ವರ್ಷ ತುಂಬಿದ ಯುವಕ ಯುವತಿಯರ ಮಾಹಿತಿ, ಮೃತ, ಶಾಶ್ವತವಾಗಿ ವಲಸೆ ಹೋದ, ಮತದಾರರ ಪಟ್ಟಿಯಲ್ಲಿ ಎರಡು ಅಥವಾ ಎರಡಕ್ಕಿಂತ ಹೆಚ್ಚು ಬಾರಿ ಹೆಸರು ಇರುವ ಮತದಾರರ ವಿವರವನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ನೀಡಿ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You cannot copy content from Baravanige News

Scroll to Top