ಮಂಗಳೂರು : ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವಿಧ್ಯಾರ್ಥಿನಿ ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಅವರು ಸೋಮವಾರ ಭೇಟಿ ನೀಡಿ, ಆಕೆಯ ಕುಟುಂಬದವರ ಜೊತೆ ಮಾತುಕತೆ ನಡೆಸಿದರು.
ಬಳಿಕ ಪ್ರತಿಕ್ರಿಯೆ ನೀಡಿದ ನಾಗನ ಗೌಡ ಅವರು, ಅನ್ಯಾಯಕ್ಕೊಳಗಾದ ಕುಟುಂಬದ ಪರವಾಗಿ ನಿಲ್ಲುತ್ತೇವೆ. ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದ. ಈ ಪ್ರಕರಣದಲ್ಲಿ ಆಯೋಗ ಯಾವ ರೀತಿಯಾಗಿ ಕೆಲಸ ಮಾಡಬಹುದು, ಕಾನೂನು ಪ್ರಕಾರ ಯಾವ ರೀತಿಯಲ್ಲಿ ಮುಂದುವರಿಯಲು ಸಾಧ್ಯವಿದೆ ಎಂದು ಪರಿಶೀಲಿಸುತ್ತೇವೆ. ಪ್ರಕರಣದ ಸಮಗ್ರ ಮಾಹಿತಿ ತಿಳಿದುಕೊಂಡು, ಮುಖ್ಯಮಂತ್ರಿ ಅವರ ಗಮನ ಸೆಳೆಯುತ್ತೇವೆ’ ಎಂದು ಹೇಳಿದರು. ‘ಸೌಜನ್ಯಾ ಕುಟುಂಬದ ಯಾರಿಗಾದರೂ ಸರ್ಕಾರಿ ಉದ್ಯೋಗ ನೀಡಲು ಸಾಧ್ಯವಿದೆಯೇ ಎಂಬ ಬಗ್ಗೆಯೂ ಪರಿಶೀಲಿಸುತ್ತೇವೆ’ ಎಂದು ತಿಳಿಸಿದರು.
ಇದೇ ವೇಳೆ ಸೌಜನ್ಯಾ ಮೃತದೇಹ ದೊರೆತ ಸ್ಥಳಕ್ಕೂ ಭೇಟಿ ನೀಡಿದ ಅವರು, ಸ್ಥಳೀಯ ಪೊಲೀಸರಿಂದ ಹಾಗೂ ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿ ಪಡೆದುಕೊಂಡರು.