ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂದು ನಡೆಯಿತು.
ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಬಿಜೆಪಿ ಉಡುಪಿ ಗ್ರಾಮಾಂತರ ಪ್ರ.ಕಾರ್ಯದರ್ಶಿ ಸಚಿನ್ ಪೂಜಾರಿ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಚಂದ್ರಶೇಖರ ಪ್ರಭು ಹಾಗೂ ವಿನೋದ್ ನಾಯಕ್ ರವರಿಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತು ಪದಾಧಿಕಾರಿಗಳು ಆರತಿ ಬೆಳಗಿ, ತಿಲಕವಿಟ್ಟು, ರಕ್ಷೆ ಕಟ್ಟಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ಸುಜಾಲ ಸತೀಶ್, ಸುಧಾ ಪೈ, ಮಹಿಳಾ ಮೋರ್ಚಾ ಪ್ರಮುಖರಾದ ರಜನಿ ಹೆಬ್ಬಾರ್, ಅಶ್ವಿನಿ ಶೆಟ್ಟಿ, ಮಾಯಾ ಕಾಮತ್, ಪೂರ್ಣಿಮಾ ರತ್ನಾಕರ್, ಸರೋಜ ಶೆಣೈ, ಯಶೋಧ, ಶಾಂತಿ ಮನೋಜ್, ಚಂದ್ರಿಕಾ ಮುಂತಾದವರು ಉಪಸ್ಥಿತರಿದ್ದರು.