ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ನೀರುಪಾಲು

ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆ ಸಮೀಪ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದೆ.

ಡಾ. ಆಶೀಕ್ ಗೌಡ (30) ಸಮುದ್ರ ಪಾಲಾದ ವೈದ್ಯ.

ಇವರು ಬೆಂಗಳೂರಿನ ನಿವಾಸಿಯಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಾಗ ಸ್ನೇಹಿತನನ್ನು ರಕ್ಷಿಸಲು ಹೋಗಿ ಸಮುದ್ರಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

Scroll to Top