ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ( Coronavirus ) ಮಹಾಸ್ಪೋಟವೇ ಉಂಟಾಗಿದೆ. ಹೊಸದಾಗಿ 41,457 ಮಂದಿಗೆ ಕೊರೋನಾ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದ 20 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,85,872 ಮಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ.
ಇವರಲ್ಲಿ ಬೆಂಗಳೂರಿನಲ್ಲಿ 25,595 ಸೇರಿದಂತೆ ಕರ್ನಾಟಕದಲ್ಲಿ 41,457 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರಿಂದ ಪಾಸಿಟಿವಿಟಿ ದರ ಶೇ.22ರಷ್ಟು ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.
ಇಂದು 41,457 ಮಂದಿಗೆ ಕೋವಿಡ್ ದೃಢಪಟ್ಟ ಕಾರಣ, ಬೆಂಗಳೂರಿನಲ್ಲಿ 1.78 ಸೇರಿದಂತೆ ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 2,50,381ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿತರಾದಂತ 8353 ಜನರು ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಬೆಂಗಳೂರಿನಲ್ಲಿ 7 ಮಂದಿ ಸೇರಿದಂತೆ ರಾಜ್ಯಾಧ್ಯಂತ 20 ಜನರು ಸಾವನ್ನಪ್ಪಿದ್ದಾರೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.