ಕೊಲ್ಲೂರಿಗೆ ಬಿ.ವೈ ರಾಘವೇಂದ್ರ ಭೇಟಿ- ಬಿಎಂಎಸ್ ಬಗ್ಗೆ ಗಂಟಿಹೊಳೆ ಜೊತೆ ಚರ್ಚೆ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ, ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರು ತಾಲೂಕು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ ಅವರು ತಾಯಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ದೇಗುಲದ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳಿಗೆ ಭೇಟಿಕೊಟ್ಟು ದೇವರ ದರ್ಶನ ಮಾಡಿ ಅರ್ಚನೆ ಸಲ್ಲಿಸಿದರು.

ಬೈಂದೂರು ವಿಧಾನಸಭಾ ಕ್ಷೇತ್ರ ಶಿವಮೊಗ್ಗ ಕ್ಷೇತ್ರಕ್ಕೆ ಒಳಪಡುವ ಕಾರಣ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸಂಸದರ ಜೊತೆಗಿದ್ದರು.

ಬೈಂದೂರು ಮಾಜಿ ಶಾಸಕ ಬಿಜೆಪಿ ಮುಖಂಡ ಬಿ.ಎಂ ಸುಕುಮಾರ್ ಶೆಟ್ಟಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಬಗ್ಗೆ ಎರಡು ದಿನದ ಹಿಂದೆ ಘೋಷಣೆ ಮಾಡಿದ್ದರು. ದೇಗುಲ ಭೇಟಿ ಸಂದರ್ಭದಲ್ಲಿ ಸಾಧಕ-ಬಾಧಕಗಳ ಚರ್ಚೆ ಸಂಸದರು ಮತ್ತು ಶಾಸಕರ ನಡುವೆ ನಡೆಯಿತು.

You cannot copy content from Baravanige News

Scroll to Top