ಉಡುಪಿ : ಪ್ಲಾಸ್ಟರ್‌ ಆಫ್ ಪ್ಯಾರೀಸ್ ಗಣಪತಿ ವಿಗ್ರಹ ನಿಷೇಧ- ಡಿಸಿ ವಿದ್ಯಾಕುಮಾರಿ

ಉಡುಪಿ : ಪ್ಲಾಸ್ಟರ್‌ ಆಫ್ ಪ್ಯಾರಿಸ್‌ನಿಂದ ಗಣಪತಿ ವಿಗ್ರಹಗಳನ್ನು ತಯಾರಿಸಿ ಮಾರಾಟ ಮಾಡುವುದು ನಿಷೇಧ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿರುವ ಗಣಪತಿ ವಿಗ್ರಹಗಳ ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಮಳಿಗೆಗಳನ್ನು ಪರೀಕ್ಷಿಸಿದಾಗ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ವಿಗ್ರಹಗಳನ್ನು ತಯಾರಿಸುತ್ತಿರುವುದು ಕಂಡು ಬಂದಿದೆ.

ಹಾಗೂ ಬಣ್ಣ ಲೇಪಿತವಾದ ವಿಗ್ರಹಗಳನ್ನು ಮಾರಾಟಕ್ಕಿಟ್ಟಿರುವುದು ಗಮನಕ್ಕೆ ಬಂದಿದೆ ಎಂದು ವಿದ್ಯಾಕುಮಾರಿ ಅವರು ಹೇಳಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಉಪಯೋಗಿಸಿ ತಯಾರಿಸುತ್ತಿರುವ ವಿಗ್ರಹಗಳು, ಬಣ್ಣ ಲೇಪಿತವಾದ ಹಾಗೂ ಈಗಾಗಲೇ ತಯಾರಿಸಿ ಅಥವಾ ಇತರೆ ರಾಜ್ಯಗಳಿಂದ ಅಮದು ಮಾಡಿಕೊಂಡು ಮಾರಾಟಕ್ಕೆ ಇಟ್ಟಿರುವ ನಿಷೇಧಿತ ವಸ್ತುಗಳಿಂದ ತಯಾರಿಸಿದ ವಿಗ್ರಹಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಶಕ್ಕೆ ಪಡೆದ ವಿಗ್ರಹಗಳನ್ನು ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಿ, ಶೆಡ್ಡರ್‌ಗಳನ್ನು ಉಪಯೋಗಿಸಿ ಲ್ಯಾಂಡ್ ಫಿಲ್‌ಸೈಟ್‌ನಲ್ಲಿ ವಿಲೇವಾರಿ ಮಾಡಬೇಕೆಂದು ಪೌರಾಯುಕ್ತರು/ ಮುಖ್ಯಾಧಿಕಾರಿಗಳು, ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯತ್ ಇವರಿಗೆ ಪತ್ರದ ಮೂಲಕ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

You cannot copy content from Baravanige News

Scroll to Top