ಬೆಂಗಳೂರು, ಸೆ.15: ಬಹುಕೋಟಿ ವಂಚನೆ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದೆ. ಸದ್ಯ ಚೈತ್ರಾ ಕುಂದಾಪುರ ಅಸ್ವಸ್ಥ ಸ್ಥಿತಿಯಲ್ಲಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಉದ್ಯಮಿ ಗೋವಿಂದ ಬಾಬು ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ದೂರಿನ ಮೇಲೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ.
ಸಿಸಿಬಿ ವಿಚಾರಣೆ ನಡೆಯುತ್ತಿರುವಾಗಲೇ ಇಂದಿರಾ ಕ್ಯಾಂಟೀನ್ ಬಿಲ್ಗಾಗಿ ಇಷ್ಟೆಲ್ಲಾ ಷಡ್ಯಂತ್ರ ನಡೆದಿದೆ ಅನ್ನೋ ಸ್ಫೋಟಕ ಹೇಳಿಕೆಯು ಹೊರ ಬಿದ್ದಿದೆ. ಹೀಗಾಗಿ ಸಿಸಿಬಿ ತನಿಖೆ ನಡೆಯುತ್ತಿದ್ದು, ಇಂದು ಚೈತ್ರಾ ಕುಂದಾಪುರಗೆ ಅನಾರೋಗ್ಯ ಕಾಣಿಸಿಕೊಂಡಿದೆ