ಉಡುಪಿಯ ಪತ್ರಕರ್ತರಿಗೆ ಉಚಿತ ಕನ್ನಡಕ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಐಎಂಎ ಉಡುಪಿ ಕರಾವಳಿ ಶಾಖೆಯ ಸಹಯೋಗ ದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ನೇತ್ರ ಪರೀಕ್ಷೆ ನಡೆಸಿದ ಪತ್ರಕರ್ತರಿಗೆ ಉಡುಪಿ ಪ್ರಸಾದ್ ನೇತ್ರಾಲಯದ ವತಿಯಿಂದ ಉಚಿತ ಕನ್ನಡಕವನ್ನು ಅ.10ರಂದು ಪತ್ರಿಕಾ ಭವನದಲ್ಲಿ ವಿತರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸುವರ್ಣ ಟಿವಿ ವಾಹಿನಿಯ ಮಂಗಳೂರು ವರದಿಗಾರ ಭರತ್‌ರಾಜ್ ಸನಿಲ್ ಪತ್ರಕರ್ತರಿಗೆ ಕನ್ನಡಕವನ್ನು ವಿತರಿಸಿದರು. ಅಧ್ಯಕ್ಷತೆಯನ್ನು ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್ ಉಪಸ್ಥಿತರಿದ್ದರು. ಸಂಘದ ಸದಸ್ಯ ಮೈಕಲ್ ರೋಡಿಗ್ರಸ್ ಕಾರ್ಯಕ್ರಮ ನಿರೂಪಿಸಿದರು.

You cannot copy content from Baravanige News

Scroll to Top