ಮಣಿಪಾಲ, ಅ 18: ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕದ ಬಳಿ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.
ಮೃತ ಯುವಕ ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26) ಎಂದು ತಿಳಿದುಬಂದಿದೆ. ಯುವಕ ಅವಿವಾಹಿತನಾಗಿದ್ದು, ಅಡಿಗೆ ವೃತ್ತಿ ಮಾಡಿಕೊಂಡಿದ್ದರು. ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡಿಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುವ ಸಮಯ ಈ ದುರ್ಘಟನೆ ನಡೆದಿದೆ.
ಮಣಿಪಾಲ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಕೆ.ಎಂ ಸಿಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು.