ಕಾಪು, ಅ.26: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮಂಗಳವಾರ ರಾತ್ರಿ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಅನನ್ಯ (17) ಎಂದು ಗುರುತಿಸಲಾಗಿದೆ.
ಅನನ್ಯ ಶಂಕರಪುರ ಸೈಂಟ್ ಜೋನ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಅ.24ರಂದು ರಾತ್ರಿ ಹೆತ್ತವರೊಂದಿಗೆ ಮಲಗಿದ್ದು, ಬೆಳಗ್ಗೆ ಎದ್ದು ನೋಡುವಾಗ ಅಲ್ಲಿರಲಿಲ್ಲ. ಬಳಿಕ ಹುಡುಕಾಡಿದಾಗ ಪಕ್ಕದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿತ್ತು.
ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.