ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್ ಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಬರವಣಿಗೆ ನ್ಯೂಸ್: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ 2 ನೇ ಎಸಿಜೆಎಂ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, 4 ಸಾವಿರ ಭದ್ರತಾ ನಗದು ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿ ಜಾಮೀನು ನೀಡಿದೆ.

ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಿನ್ನೆಗೆ ಪೂರ್ಣಗೊಂಡಿದ್ದು, ಇಂದಿಗೆ ಆದೇಶ ಕಾಯ್ದಿರಿಸಲಾಗಿತ್ತು.

ಆರೋಪಿತ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನಂತರ ಅವರು ಬೆಂಗಳೂರಿನ ಎಸಿಜೆಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದ ಕಾರಣ ಇಂದು ಸಂಜೆ ವೇಳೆಗೆ ಸಂತೋಷ್ ಬಿಡುಗಡೆಯಾಗುವ ಸಾಧ್ಯತೆಯಿದೆ.

ಕೆಲ ದಿನಗಳ ಹಿಂದೆ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಉಗುರಿನ ಲಾಕೆಟ್ ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು.

You cannot copy content from Baravanige News

Scroll to Top