ಅಲೆವೂರು: ಟೆಂಪೋಗೆ ಸ್ಕೂಟರ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಅಲೆವೂರು: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಟೆಂಪೋಗೆ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಅಲೆವೂರು ಮಣಿಪಾಲ ರಸ್ತೆಯ ವಿಟ್ಠಲ ಸಭಾಭವನದ ಬಳಿ ನಿನ್ನೆ ಸಂಜೆ ಸಂಭವಿಸಿದೆ.

ಸ್ಕೂಟರ್ ಸವಾರ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿರುವ ಪ್ರಗತಿನಗರದ ಮಹಮ್ಮದ್ ತನ್ಸಿಲ್(28) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಅಪಘಾತ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.

Scroll to Top