ಕಾಪು, ನ.13: ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.
ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ರವಿವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾಗಸ್ವರ ಸೇವೆ ನೀಡಿದ್ದು ಇಂದು ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದು, ಹೋಟೇಲ್ ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ.
ಮೃತರು, ಪತ್ನಿ, ಮಗಳು, ಸಹೋದರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.