ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20 ವರ್ಷ) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.
ಸೋಮವಾರ ಬೆಳಗ್ಗಿನ ಜಾವಾ ಮಹಿಳಾ ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.
ಕದ್ರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದು ತನಿಖೆ ಮುಂದುವರೆದಿದೆ.